14/07/2026
ಹಾಸನ :ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ಕೆಲ ಪ್ರವಾಸಿಗರು ಡಿಜೆ ಸಂಗೀತ ಹಾಕಿಕೊಂಡು ನೃತ್ಯ ಮಾಡಿದ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಧಾರ್ಮಿಕ ಕ್ಷೇತ್ರದ ಪಾವಿತ್ರ್ಯ ಕಾಪಾಡಬೇಕಾದ ಸ್ಥಳದಲ್ಲಿ ಮನಬಂದಂತೆ ವರ್ತಿಸಿರುವುದು ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇಂತಹ ಘಟನೆಗಳು ಇದೇ ಮೊದಲಲ್ಲ, ಈ ಹಿಂದೆಯೂ ಹಲವು ಬಾರಿ ಇದೇ ರೀತಿಯ ಅಸಭ್ಯ ವರ್ತನೆಗಳು ನಡೆದಿವೆ ಎಂದು ಅವರು ತಿಳಿಸಿದ್ದಾರೆ. ದೇವಾಲಯಕ್ಕೆ ಭಕ್ತಿಭಾವದಿಂದ ಆಗಮಿಸುವ ಭಕ್ತರಿಗೆ ಇದರಿಂದ ಅಸಮಾಧಾನ ಉಂಟಾಗುತ್ತಿದೆ ಎನ್ನಲಾಗಿದೆ. ದೇವಾಲಯದ ಆವರಣದಲ್ಲಿ ಧ್ವನಿವರ್ಧಕಗಳ ಬಳಕೆ, ಡಿಜೆ,ನೃತ್ಯ ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ನಿಗಾ ವಹಿಸಿ, ದೇವಾಲಯದ ಪಾವಿತ್ರ್ಯ ಕಾಪಾಡಲು ಅಗತ್ಯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು �